ALERT : ಅಯ್ಯಪ್ಪನ ಭಕ್ತರೇ ಎಚ್ಚರ : ಶಬರಿಮಲೆ ಯಾತ್ರೆಗೆ ಹೋಗುವ ಮುನ್ನ ಈ ಸುದ್ದಿ ಓದಿ.!

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.

ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು.

ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.
ನೇಗ್ಲೇರಿಯಾ ಫೌಲರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.

ಹಾಗಾಗಿ ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.
ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು. ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read