ಡಿಸಿ ಕಚೇರಿಯಲ್ಲೇ ಆಜಾನ್ ಕೂಗಿದ ಯುವಕ: ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಿಂತು ವ್ಯಕ್ತಿಯೊಬ್ಬ ಆಜಾನ್ ಕೂಗಿದ ಘಟನೆ ನಡೆದಿದೆ.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಜಾನ್ ಬಗ್ಗೆ ಹೇಳಿಕೆ ನೀಡಿದ್ದನ್ನು ಮಾ. 17 ರಂದು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿ ಉದ್ಧಟತನ ಪ್ರದರ್ಶಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.

ಆಜಾನ್ ಕೂಗಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ  ಆ ವ್ಯಕ್ತಿಯನ್ನು ಕರೆದು ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಕಳುಹಿಸಿ ಮುಂಜಾಗ್ರತಾ  ಪ್ರಕರಣವನ್ನು ದಾಖಲಿಸಲಾಗಿರುತ್ತದೆ. ಘಟನೆ ನಡೆದ ಸಮಯದಲ್ಲಿ ಹಾಜರಿದ್ದ ವ್ಯಕ್ತಿಗಳ ಪೂರ್ವಪರದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಸದರಿ ಮಾಹಿತಿಯ ಆಧಾರದ ಮೇಲೆ ಅವರುಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read