HomeKarnatakaಅಜೀಂ ಪ್ರೇಮ್ ಜಿ ವಿವಿಗೆ ನುಗ್ಗಿ ದಾಂಧಲೆ ಆರೋಪ: 25 ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಅಜೀಂ ಪ್ರೇಮ್ ಜಿ ವಿವಿಗೆ ನುಗ್ಗಿ ದಾಂಧಲೆ ಆರೋಪ: 25 ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಬೆಂಗಳೂರು: ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಆರೋಪದಡಿ ಎಬಿವಿಪಿಯ 25 ಕಾರ್ಯಕರ್ತರ ವಿರುದ್ಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ವಿವಿಯ ಭದ್ರತಾ ವಿಭಾಗದ ಮುಖ್ಯಸ್ಥ ಎಸ್. ವಿಲ್ಸನ್ ನೀಡಿದ ದೂರಿನ ಅನ್ವಯ ಸರ್ಜಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ 25 ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಫೆಬ್ರವರಿ 24ರಂದು ಸಂಜೆ ಸರ್ಜಾಪುರದ ಅಜಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರ ಸೈನಿಕರ ವಿರುದ್ಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆರೋಪಿಸಿ ವಿವಿ ಎದುರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅವರನ್ನು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular