HomeKarnatakaBIG NEWS: ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಕೇಸ್: ಅಸಹಜ ಸಾವು ದೂರು ದಾಖಲು

BIG NEWS: ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಕೇಸ್: ಅಸಹಜ ಸಾವು ದೂರು ದಾಖಲು

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಎಂದು ಸಹೋದರ ದೂರು ದಾಖಲಿಸಿದ್ದಾರೆ.

ಬಿ.ಸಿ.ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಹೋದರ ಪ್ರಭುದೇವ ಎಂಬುವವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದು ಅಸಹಜ ಸಾವು. ಮದುವೆಯಾಗಿ 16 ವರ್ಷಗಳಾಗಿತ್ತು. ಆದರೆ ಮಕ್ಕಳಿರಲಿಲ್ಲ. ಇದರಿಂದ ಪ್ರತಾಪ್ ಕುಮಾರ್ ತೀವ್ರ ಬೇಸರದಲ್ಲಿದ್ದರು. ಮಂಕಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೃತ ಪ್ರತಾಪ್ ಕುಮಾರ್ ಮಜೈ ಸಚಿವ ಬಿ.ಸಿ.ಪಾಟೀಲ್ ಅವರ ಮೊದಲ ಮಗಳು ಸೌಮ್ಯ ಅವರ ಪತಿ. ಜುಲೈ 8ರಂದು ಅರಕೆರಾ ಬಳಿ ಕಾಡಂಚಿನ ರಸ್ತೆಯಲ್ಲಿ ಕಾರು ನಿಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular