HomeKarnatakaಎಡಿಜಿಪಿ ಬಿ.ದಯಾನಂದ್ ಗೆ ಡಿಜಿಪಿ ಹುದ್ದೆಗೆ ಬಡ್ತಿ

ಎಡಿಜಿಪಿ ಬಿ.ದಯಾನಂದ್ ಗೆ ಡಿಜಿಪಿ ಹುದ್ದೆಗೆ ಬಡ್ತಿ

ಬೆಂಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಅವರಿಗೆ ಡಿಜಿಪಿ (Director General of Police) ಹುದ್ದೆಗೆ ಬಡ್ತಿ ನೀಡಲಾಗಿದೆ.

1994ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಬಿ.ದಯಾನಂದ್ ಪ್ರಸ್ತುತ ಬೆಂಗಳೂರಿನಲ್ಲಿ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ADGP) ಕಾಅರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಐಪಿಎಸ್ ವೇತನ ನಿಯಮಗಳ ಅನ್ವಯ ಲೆವೆಲ್–16 ವೇತನ ಶ್ರೇಣಿಯ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.

ಈ ಬಡ್ತಿಗೆ 2025ರ ಸೆಪ್ಟೆಂಬರ್ 12ರಿಂದ ಪೂರ್ವಾನ್ವಯ ಪರಿಣಾಮ ನೀಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರನ್ನು ಡಿಜಿಪಿ, ಆಂತರಿಕ ಭದ್ರತಾ ವಿಭಾಗ (Internal Security Division) ಹುದ್ದೆಗೆ ನೇಮಕ ಮಾಡಲಾಗಿದೆ.

ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಹುದ್ದೆಯನ್ನು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್‌ನ ಡಿಜಿಪಿ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿಗಳಿರುವ ಹುದ್ದೆ ಎಂದು ಸರ್ಕಾರ ಘೋಷಿಸಿದೆ.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವೆಗಳು–4) ಆದೇಶದಂತೆ ಈ ನೇಮಕಾತಿ ನಡೆದಿದೆ.

ಇದೇ ವೇಳೆ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ನೈರುತ್ಯ ಡಿಸಿಪಿಯಾಗಿದ್ದ ಅನಿತಾ ಭೀಮಪ್ಪ ಹದ್ದಣ್ಣನವರ್ ಅವರನ್ನು ಸಿಐಡಿ ಎಸ್ಪಿಯಾಗಿ ಹಾಗೂ ಸ್ಯಾಮ್ ವರ್ಗೀಸ್ ಅವರನ್ನು ಮಂಗಳೂರು ಕಾನೂನು-ಸುವ್ಯವಸ್ಥೆ ಡಿಸಿಪಿಯಾಗಿ ನೇಮಿಸಲಾಗಿದೆ.

ಸ್ಥಳ ನಿರೀಕ್ಷೆಯಲ್ಲಿದ್ದ ಡಾ. ರಾಮ್ ಎಲ್. ಅರಸಿದ್ಧಿ ಅವರಿಗೆ ಬೆಂಗಳೂರು ಗುಪ್ತಚರ ಡಿಸಿಪಿ ಮತ್ತು ಕೆ. ಲಕ್ಷ್ಮೀ ಗಣೇಶ್ ಅವರಿಗೆ ಬೆಂಗಳೂರು ನೈರುತ್ಯ ಡಿಸಿಪಿ ಹುದ್ದೆ ನೀಡಲಾಗಿದೆ.

ಇನ್ನು ಪ್ರಸ್ತುತ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ 1999ರ ಬ್ಯಾಚ್‌ನ ಹಿರಿಯ ಐಎಫ್‌ಎಸ್ ಅಧಿಕಾರಿ ಲಿಂಗರಾಜ ಎಸ್.ಎಸ್. ಅವರಿಗೆ ರೇಷ್ಮೆ ಅಭಿವೃದ್ಧಿ ಆಯುಕ್ತರು ಹಾಗೂ ರೇಷ್ಮೆ ಇಲಾಖೆಯ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಇದರ ಜೊತೆಗೆ, ಬೆಂಗಳೂರಿನಲ್ಲಿರುವ ‘ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ’ಯ ನಿರ್ದೇಶಕ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ಇವರಿಗೇ ನೀಡಲಾಗಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿರುವ 2012ರ ಬ್ಯಾಚ್‌ನ ಐಎಎಸ್ ಅಧಿಕಾರಿ ಡಾ. ಶಿವಶಂಕರ ಎನ್. ಅವರಿಗೆ ಬೆಂಗಳೂರಿನ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ (ಕವಿಕಾ) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿ ಸರ್ಕಾರ ಆದೇಶಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular