BIG NEWS: ಪ್ರೀತಿಸಲು ನಿರಾಕರಿಸಿದ್ದಕ್ಕೆ B.ed ವಿದ್ಯಾರ್ಥಿನಿ ಅಪಹರಣ; ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿ ರಕ್ಷಿಸಿದ ಪೊಲೀಸರು

ಹಾವೇರಿ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಬಿ.ಎಡ್ ವಿದ್ಯಾರ್ಥಿನಿಯನ್ನು ಪಾಗಲ್ ಪ್ರೇಮಿಯೊಬ್ಬ ಅಪಹರಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ವಿದ್ಯಾರ್ಥಿನಿ ಅಪಹರಣ ಮಾಡಿದ್ದ ಕೆಲವೇ ಗಂಟೆಗಳಲ್ಲಿ ಪೊಲೀಸರು ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ನೆರೆಮನೆಯವನೇ ಆದ ಪಾಗಲ್ ಪ್ರೇಮಿ ಹಾವೇರಿಯ ಓಲ್ಡ್ ಪೋಸ್ಟ್ ಆಫೀಸ್ ಬಳಿ ಅಪಹರಿಸಿದ್ದ.

ತಕ್ಷಣ ವಿದ್ಯಾರ್ಥಿನಿಯ ಪೋಷಕರು ಹಾವೇರಿ ನಗರ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಮೊಬೈಲ್ ಲೊಕೇಷನ್ ಆಧಾರದ ಮೇಲೆ ರಕ್ಷಣೆಗೆ ಮುಂದಾಗಿದ್ದಾರೆ. ಪೊಲೀಸರು ಬೆನ್ನಟ್ಟಿರುವುದು ಗೊತ್ತಾಗುತ್ತಿದ್ದಂತೆ ಯುವಕ ವಿದ್ಯಾರ್ಥಿನಿಯನ್ನು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರು ಬಳಿ ಬಿಟ್ಟು ಪರಾರಿಯಾಗಿದ್ದ.

ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚಿದ ಪೊಲೀಸರು ಆಕೆಯನ್ನು ರಕ್ಷಣೆ ಮಾಡಿ ಠಾಣೆಗೆ ಕರೆತಂದಿದ್ದಾರೆ. ಸಿಪಿಐ ಮೋತಿಲಾಲ್ ಹಾಗೂ ಸಿಬ್ಬಂದಿಯ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯುವತಿ ಪೋಷಕರು ಪುತ್ರಿಯನ್ನು ಅಪಹರಿಸಿದ ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿ ಯುವಕನನ್ನು ವಿಷ್ಣು ಎಂದು ಗುರುತಿಸಲಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read