HomeKarnatakaBIG NEWS: ನಿತ್ಯಾನಂದ ಸ್ವಾಮೀಜಿಯಂತೆ ಸಿಎಂ ಸಿದ್ದರಾಮಯ್ಯಗೂ ಭಕ್ತರಿದ್ದಾರೆ; ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

BIG NEWS: ನಿತ್ಯಾನಂದ ಸ್ವಾಮೀಜಿಯಂತೆ ಸಿಎಂ ಸಿದ್ದರಾಮಯ್ಯಗೂ ಭಕ್ತರಿದ್ದಾರೆ; ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ಬೆಂಗಳೂರು: ನಿತ್ಯಾನಂದ ಸ್ವಾಮೀಜಿಯಂತೆ ಸಿಎಂ ಸಿದ್ದರಾಮಯ್ಯನವರಿಗೂ ಭಕ್ತರಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯನವರೇ ನಮಗೆ ರಾಮ. ಅಯೋಧ್ಯೆಗೆ ಹೋಗಿ ಯಾಕೆ ರಾಮನನ್ನು ಪೂಜಿಸಬೇಕು ಎಂಬ ಮಾಜಿ ಸಚಿವ ಹೆಚ್.ಆಂಜನೇಯ ಹೆಳಿಕೆಗೆ ಪ್ರತಿಕ್ರಿಯಿಸಿದ ಬಿ.ಕೆ.ಹರಿಪ್ರಸಾದ್, ಎಲ್ಲರಿಗೂ ಭಕ್ತರು ಇರುತ್ತಾರೆ. ಕೈಲಾಸ ಆಶ್ರಮದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಹಾಗೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಭಕ್ತರಿದ್ದಾರೆ ಎಂದು ಹೇಳಿದರು.

ಈ ವಿಚಾರವನ್ನು ಅಷ್ಟು ಗಂಭೀರವಾಗಿ ತೆಗೆದುಕೊಳ್ಳಬಾರದು. ಎಲ್ಲರಿಗೂ ಅವರದ್ದೇ ಭಕ್ತರಿರುತ್ತಾರೆ ಎಂದು ಕುಹಕವಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular