ಬೆಂಗಳೂರು: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಯುವ ಸಮುದಾಯ ಕೇಂದ್ರ ಸರ್ಕಾರವನ್ನೇ ಬಗ್ಗಿಸಿದೆ. ಯುವ ಶಕ್ತಿ ಏನೆಂಬುದನ್ನು ತೋರಿಸಿಕೊಂಟ್ಟಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದಾರೆ. ಪ್ರಧಾನಿ ಮೋದಿಯವರಿಗೆ 4-5 ಪುಟಗಳ ಸುದೀರ್ಘ ರಾಜೀನಾಮೆ ಪತ್ರ ಬರೆದಿದ್ದಾರೆ. ಆ ಮೂಲಕ ತಾವೇನೋ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳಿಕೊಳ್ಳಲು ಹೋಗಿ ನಗೆಪಾಟಲೀಗೀಡಾಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಧರ್ಮೇಂದ್ರ ಏನೋ ರಾಜೀನಾಮೆ ಕೊಟ್ಟಿದ್ದಾರೆ ಆದರೆ ಪ್ರಧಾನ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ಪ್ರತಿಭಟನಾ ನಿರತ ಮಕ್ಕಳ ಮೇಲೆ ನಡೆದಿರುವ ದೌರ್ಜನ್ಯ ಗೃಹ ಸಚಿವರಿಂದ ಆಗಿದೆ. ಹಾಗಾಗಿ ಗೃಹ ಸಚಿವ ಅಮಿತ್ ಶಾ ಕೂಡ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

