ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಇದೀಗ ಕಾಂಗ್ರೆಸ್ ನಾಯಕರಲ್ಲಿ ಪೈಪೋಟಿ ಆರಂಭವಾಗಿದೆ. ಈವರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿ ಇತ್ತು. ಆದರೆ ಈಗ ಇನ್ನೋರ್ವ ನಾಯಕನ ಹೆಸರು ಮುನ್ನೆಗೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೆಸರು ಕೇಳಿ ಬಂದಿದೆ.
ಕೆಪಿಸಿಸಿ ಅಧ್ಯಕ್ಷರ ರೇಸ್‌ನಲ್ಲಿ ಬಿ.ಕೆ. ಹರಿಪ್ರಸಾದ್ ಹೆಸರು ಮುನ್ನೆಲೆಗೆ ಬಂದಿದ್ದು, ತೀವ್ರ ಕುತೂಹಲ ಮೂಡಿಸಿದೆ. ಒಬಿಸಿ ಕೋಟಾದಡಿ ಇವರ ಹೆಸರನ್ನು ಹೈಕಮಾಂಡ್ ಎದುರು ಪ್ರಸ್ತಾಪಿಸಲಾಗಿದ್ದು, ಕೆ.ಸಿ. ವೇಣುಗೋಪಾಲ್ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.
ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಮಂತ್ರಿಸ್ಥಾನಕ್ಕೆ ಪಟ್ಟು ಹಿಡಿದರೆ, ಹರಿಪ್ರಸಾದ್ ಅವರನ್ನೇ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂದು ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಹಿರಿಯ ಶಾಸಕರು ಈ ಹೆಸರು ಪ್ರಸ್ತಾಪಿಸುವ ನಿರೀಕ್ಷೆಯಿದೆ.
ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದ್ದು, ಯಾರು ಅಧ್ಯಕ್ಷರಾಗಲಿದ್ದಾರೆ? ಎಂದನ್ನು ಕಾದುನೋಡಬೇಕಿದೆ.

