HomeLatest NewsGOOD NEWS : ರಾಜ್ಯದಲ್ಲಿ ಬಿ-ಖಾತಾ ನೀಡುವ ಅವಧಿ ಮೂರು ತಿಂಗಳು ವಿಸ್ತರಣೆ :...

GOOD NEWS : ರಾಜ್ಯದಲ್ಲಿ ಬಿ-ಖಾತಾ ನೀಡುವ ಅವಧಿ ಮೂರು ತಿಂಗಳು ವಿಸ್ತರಣೆ : ಸಚಿವ ಭೈರತಿ ಸುರೇಶ್

ಬೆಂಗಳೂರು : ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ತಿಳಿಸಿದ್ದಾರೆ.

“ಬಿ” ಖಾತಾ ಪಡೆಯಲು ಅವಧಿ ವಿಸ್ತರಣೆ

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 110 ರ ಅನ್ವಯ “ಎ” ರಿಜಿಸ್ಟರ್ನಲ್ಲಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾದ ಬಡಾವಣೆಯಲ್ಲಿನ ಸ್ವತ್ತುಗಳಿಗೆ ಇ-ಖಾತಾ ನೀಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ, ಭೂ ಪರಿವರ್ತನೆ ಆಗದೇ ಉಪ-ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿದ್ದು, ಆದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ/ಕಟ್ಟಡಗಳಿಗೆ “ಬಿ” ರಿಜಿಸ್ಟರ್ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ. ಈ ಅವಕಾಶವನ್ನು ಒಮ್ಮೆ ಮಾತ್ರ ನೀಡಲಾಗುತ್ತಿದೆ.

“ಬಿ” ರಿಜಿಸ್ಟರ್ನಲ್ಲಿ ದಾಖಲಿಸುವ ಆಸ್ತಿಗಳಿಗೆ 2024-25ನೇ ಸಾಲಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ತದನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುತ್ತದೆ. “ಬಿ” ರಿಜಿಸ್ಟರ್ನಲ್ಲಿ ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು/ ಸರ್ಕಾರದ ನಿಗಮ ಮಂಡಳಿಗಳ ಜಾಗಗಳು/ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಜಾಗಗಳು ಹೊರತುಪಡಿಸಿ ದಿನಾಂಕ:10.09.2024 ರ ಪೂರ್ವಕ್ಕೆ ನೋಂದಾಯಿತವಾದ ಭೂ ಪರಿವರ್ತನೆ ಆಗದೇ ಉಪ ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ/ಕಟ್ಟಡಗಳಿಗೆ “ಬಿ” ರಿಜಿಸ್ಟರ್ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ.ಆದುದರಿಂದ ಇದುವರೆಗೆ ಇ-ಖಾತಾ ಪಡೆಯದ ಅಂತಹ ಎಲ್ಲಾ ಸ್ವತ್ತುಗಳ ಮಾಲೀಕರು ಕೂಡಲೇ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಪರ್ಕಿಸಿ “ಬಿ” ರಿಜಿಸ್ಟರ್ನಲ್ಲಿ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿ ಸರ್ಕಾರ ನೀಡಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.“ಬಿ” ಖಾತಾ ಪಡೆಯಲು ಈ ಹಿಂದೆ ನೀಡಿದ್ದ ಅಂತಿಮ ದಿನಾಂಕ:10.05.2025ನ್ನು ವಿಸ್ತರಿಸಿದ್ದು, ಸಾರ್ವಜನಿಕರು ಈ ಅವಕಾಶವನ್ನು ಉಪಯೋಗಿಸಿಕೊಂಡು ಶೀಘ್ರವಾಗಿ ಇ-ಖಾತಾ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular