HomeKarnatakaBREAKING: ಜು. 18ರವರೆಗೆ ಇಡಿ ಕಸ್ಟಡಿಗೆ ಕಾಂಗ್ರೆಸ್ ಶಾಸಕ ನಾಗೇಂದ್ರ

BREAKING: ಜು. 18ರವರೆಗೆ ಇಡಿ ಕಸ್ಟಡಿಗೆ ಕಾಂಗ್ರೆಸ್ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 18ರವರೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ವಹಿಸಲಾಗಿದೆ.

ನ್ಯಾ. ಸಂತೋಷ್ ಗಜಾನನ ಭಟ್ ಅವರು ಆದೇಶ ನೀಡಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಬಿ. ನಾಗೇಂದ್ರ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ರಾತ್ರಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು.

ಇಂದು ಬೆಳಿಗ್ಗೆ ಅವರನ್ನು ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಇಡಿ ಮನವಿ ಹಿನ್ನಲೆಯಲ್ಲಿ ಜು. 18ರವರೆಗೆ ಕಸ್ಟಡಿಗೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular