HomeKarnatakaಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಊಟಕ್ಕೆ ಸೋನಾಮಸೂರಿ ಅಕ್ಕಿ ನೀಡಲು ಸಚಿವರ ಸೂಚನೆ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಊಟಕ್ಕೆ ಸೋನಾಮಸೂರಿ ಅಕ್ಕಿ ನೀಡಲು ಸಚಿವರ ಸೂಚನೆ

ಬೆಂಗಳೂರು: ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟದ ಎಸ್.ಸಿ., ಎಸ್.ಟಿ. ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಊಟಕ್ಕೆ ಸೋನಾಮಸೂರಿ ನೀಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ

ವಿಕಾಸಸೌಧದ ಸಭಾಂಗಣದಲ್ಲಿ ಇಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 2023 -24 ನೇ ಸಾಲಿನ ಎಸ್.ಸಿ.ಎಸ್.ಪಿ & ಟಿ.ಎಸ್.ಪಿ ಆಯವ್ಯಯ ಹಂಚಿಕೆಯ ಬಗ್ಗೆ ನೋಡಲ್ ಏಜೆನ್ಸಿ ಸಭೆಯಲ್ಲಿ ಉಭಯ ಸಚಿವರು ವಿಶೇಷವಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ಊಟದ ವ್ಯವಸ್ಥೆಯ ಚರ್ಚೆ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸ್ಟೆಲ್ ಗಳಲ್ಲಿ ವಾಸವಿರುವ ವಿದ್ಯಾರ್ಥಿಗಳ ಅರೋಗ್ಯದ ಹಿತದೃಷ್ಟಿಯಿಂದ ಸುಮಾರು 2,50,000 ಎಲ್ಲಾ ವಿದ್ಯಾರ್ಥಿ ನಿಲಯಗಳಿಗೆ ಸೋನಾಮಸೂರಿ ಅಕ್ಕಿ ನೀಡಲು ತಿಳಿಸಿದ್ದಾರೆ. ರಾಜ್ಯದಲ್ಲಿ ಆಯಾ ವಲಯವಾರು ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಊಟದ ವ್ಯವಸ್ಥೆ ಮಾಡಲಾಗಿದ್ದು, ಆದರೆ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿನಿಲಯಗಳಲ್ಲಿ ಅಕ್ಕಿಯಿಂದ ಮಾಡುವ ಆಹಾರ ಪದಾರ್ಥಗಳಿಗೆ ಪ್ರಾಮುಖ್ಯತೆ ನೀಡಿದ್ದು, ಹಾಗಾಗಿ ಈ ಹಿಂದೆ ಬಳಕೆ ಮಾಡುತಿದ್ದ ಅಕ್ಕಿಗಿಂತ ಇನ್ನು ಮುಂದೆ ರಾಜ್ಯದ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಉತ್ತಮ ಗುಣಮಟ್ಟದ ಸೋನಾ ಮಸೂರಿ ಅಕ್ಕಿ ನೀಡಲು ಸಭೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಉಭಯ ಸಚಿವರು ಸಲಹೆ ನೀಡಿ ಮುಂದಿನ ತಿಂಗಳಿಂದಲೇ ಜಾರಿಗೆ ತರುವ ವ್ಯವಸ್ಥೆ ಮಾಡಿ ಎಂದು ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular