HomeKarnatakaಮಾಜಿ ಸಚಿವ ಬಿ.ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ಮಾಜಿ ಸಚಿವ ಬಿ.ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಗೇಂದ್ರ ನ್ಯಾಯಾಂಗ ಬಂಧನದಲ್ಲಿದ್ದು, ಸೋಮವಾರ ಸಂಜೆ ಕೋರ್ಟ್ ನಿಂದ ಜಾಮೀನು ಸಿಕ್ಕಿರುವ ಹಿನ್ನೆಲೆಯಲಿ ಇಂದು ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ ಸಂಬಂಧ ಜುಲೈ 12ರಂದು ಇಡಿ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2 ಲಕ್ಷ ಬಾಂಡ್ , ಇಬ್ಬರ ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಸೇರಿದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular