HomeLatest NewsBIG NEWS: 10 ದಿನಗಳಲ್ಲಿ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಜಮೀರ್ ಅಹ್ಮದ್ ಹೇಳಿಕೆ

BIG NEWS: 10 ದಿನಗಳಲ್ಲಿ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಜಮೀರ್ ಅಹ್ಮದ್ ಹೇಳಿಕೆ

ಬಳ್ಳಾರಿ: ಶಾಸಕ ಬಿ.ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಯಾವುದೇ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಮ್ಮ ಕೈಯಲ್ಲಿ ಏನೂ ಇಲ್ಲ. ಎಲ್ಲಾ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು.

ಇನ್ನು ಬಿ.ನಾಗೇಂದ್ರ ಅವರು ಮತ್ತೆ ಸಚಿವರಾಗಲಿದ್ದಾರೆ. 10 ದಿನಗಳಲ್ಲಿ ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular