HomeLatest NewsBREAKING: ಮಾಜಿ ಸಚಿವ ನಾಗೇಂದ್ರ ಭವಿಷ್ಯ ನಾಳೆ ನಿರ್ಧಾರ: ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ...

BREAKING: ಮಾಜಿ ಸಚಿವ ನಾಗೇಂದ್ರ ಭವಿಷ್ಯ ನಾಳೆ ನಿರ್ಧಾರ: ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿರೀಕ್ಷಣಾ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ.

ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಶಾಸಕ ಬಿ.ನಾಗೇಂದ್ರ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್, ವಾದ-ಪ್ರತಿವಾದ ಆಲಿಸಿದ್ದು, ನಾಳೆ ಜ.೧೪ರಂದು ಆದೇಶ ಕಾಯ್ದಿರಿಸಿದೆ.

ಕೋರ್ಟ್ ನಾಳೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ಮಾಜಿ ಸಚಿವ ನಾಗೇಂದ್ರ ಬಂಧನ ಭೀತಿಯಿಂದ ಪಾರಾಗಲಿದ್ದಾರೆ. ಇಲ್ಲದಿದ್ದಲ್ಲಿ ಮತ್ತೆ ಅರೆಸ್ಟ್ ಆಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular