ದಾವಣಗೆರೆ: ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್ ಅವರನ್ನು ನಾಯಿಗೆ ಹೋಲಿಕೆ ಮಾಡಿದ್ದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಸ್ ಪಿ ಉಮಾಪ್ರಶಾಂತ್ ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬಿ.ಪಿ.ಹರೀಶ್ ಗೆ ಸಂಕಷ್ಟ ಎದುರಾಗಿದೆ.
ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮನೆಯ ಪೊಮೇರಿಯನ್ ನಾಯಿ ತರ ಆಡುತ್ತಾರೆ ಎಂದು ಬಿ.ಪಿ,.ಹರೀಶ್ ವಾಗ್ದಾಳಿ ನಡೆಸಿದ್ದರು. ಬಿಪಿ ಹರೀಶ್ ಪೊಲೀಸ್ ಅಧಿಕಾರಿಯನ್ನು ಹಾಗೂ ಇಲಾಖೆಯನ್ನು ಅಪಮಾನ ಮಾಡಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿ ವಿರುದ್ಧ ಕೀಳು ಮಟ್ಟದ ಪದ ಪ್ರಯೋಗಿಸಿದ್ದ ಹಿನ್ನೆಲೆಯಲ್ಲಿ ಸ್ವತಃ ಉಮಾ ಪ್ರಶಾಂತ್ ದೂರು ದಾಖಲಿಸಿದ್ದರು. ಅಲ್ಲದೇ ಬಿಪಿ ಹರೀಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳಲ್ಲಿಯೂ ಆಗ್ರಹಗಳು ಕೇಳಿಬಂದಿವೆ.