ಶಿವಮೊಗ್ಗ: ದಾವಣಗೆರೆ ಎಸ್ ಪಿ ಉಮಾ ಶಂಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಿ.ಪಿ ಹರೀಶ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ದಾವಣಗೆರೆ ಎಸ್ ಪಿ ಉಮಾ ಶಂಕರ್ ಅವರನ್ನು ಪೊಮೇರಿಯನ್ ನಾಯಿಗೆ ಹೋಲಿಸಿ ಶಾಸಕ ಬಿ.ಪಿ.ಹರೀಶ್ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಿ.ಪಿ ಹರೀಶ್ ಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಡಿವೈಎಸ್ ಪಿ ನೋಟಿಸ್ ನೀಡಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಾಲಂ 35(3) ಅಡಿ ಪ್ರಕರಣ ದಾಖಲಾಗಿದ್ದು, ಸೆಪ್ಟೆಂಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಶಿಕಾರಿಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.