HomeKarnatakaBIG NEWS: ಬಿಜೆಪಿ ಪ್ರಭಾವಿ ವ್ಯಕ್ತಿಯಿಂದ ನನಗೆ ಆಫರ್; ಸಿಎಂ ಸಲಹೆಗಾರ ಶಾಸಕ ಬಿ.ಆರ್.ಪಾಟೀಲ್ ಸ್ಫೋಟಕ...

BIG NEWS: ಬಿಜೆಪಿ ಪ್ರಭಾವಿ ವ್ಯಕ್ತಿಯಿಂದ ನನಗೆ ಆಫರ್; ಸಿಎಂ ಸಲಹೆಗಾರ ಶಾಸಕ ಬಿ.ಆರ್.ಪಾಟೀಲ್ ಸ್ಫೋಟಕ ಹೇಳಿಕೆ

ಕಲಬುರ್ಗಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮತ್ತೊಂದೆಡೆ ಬಿಜೆಪಿಯ ಆಪರೇಷನ್ ಕಮಲ ಮುನ್ನೆಲೆಗೆ ಬಂದಿದೆ. ಸಿಎಂ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ್ ರನ್ನು ಬಿಜೆಪಿಗೆ ಸೆಳೆಯುವ ಯತ್ನ ನಡೆಯುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಕಲಬುರ್ಗಿಯಲ್ಲಿ ಮಾತನಾಡಿದ ಆಳಂದ ಶಾಸಕ ಬಿ.ಆರ್.ಪಾಟೀಲ್, ನನಗೆ ಬಿಜೆಪಿಯ ಪ್ರಭಾವಿ ವ್ಯಕ್ತಿಯೊಬ್ಬರು ಆಫಾರ್ ನೀಡಿದ್ದಾರೆ. ಆಪರೇಷನ್ ಕಮಲ ನಡೆಸಲು ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ನನಗೆ ಸಂಪರ್ಕ ಮಾಡಿದ್ದ ಬಿಜೆಪಿ ಪ್ರಭಾವಿ ವ್ಯಕ್ತಿ ಚುನಾವಣೆ ಖರ್ಚು ವೆಚ್ಚ ನೋಡಿಕೊಳ್ತೇವೆ. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುತ್ತೇವೆ ಎಂದು ಆಫರ್ ನೀಡಿದ್ದರು. ನನ್ನಂತೆ ಇತರ ಮೂರು ಶಾಸಕರಿಗೂ ಆಪರೇಷನ್ ಕಮಲ ಮಾಡಲು ಯತ್ನಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಎಲ್ಲಾ ಮಾಹಿತಿ ಕೊಟ್ಟಿದ್ದೇವೆ. ನಾನು ಯಾವ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular