HomeLatest NewsBIG NEWS: ಬಿ.ಆರ್.ಪಾಟೀಲ್ ಹೇಳಿಕೆಯನ್ನು ನಾನು ಖಂಡಿಸುತ್ತೇನೆ; ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದ ಡಿಸಿಎಂ

BIG NEWS: ಬಿ.ಆರ್.ಪಾಟೀಲ್ ಹೇಳಿಕೆಯನ್ನು ನಾನು ಖಂಡಿಸುತ್ತೇನೆ; ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದ ಡಿಸಿಎಂ

ಬೆಂಗಳೂರು: ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ನೀಡಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ. ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಯಾವ ಕಾರಣಕ್ಕೂ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಗುಡುಗಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿ.ಆರ್.ಪಾಟೀಲ್ ಯಾವ ಉದ್ದೇಶಕ್ಕೆ ಈ ರೀತಿ ಹೇಳಿದ್ದಾರೆ. ಅವರು ಏನು ಹೇಳುತ್ತಿದ್ದಾರೆ ಎಂಬುದು ನನಗೆ ಅರ್ಥವಾಗಿಲ್ಲ. ಅವರ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯನವರು ಗಮನಿಸಿದ್ದಾರೆ. ನಾನು ಮತ್ತೊಮ್ಮೆ ಅವರ ಹೇಳಿಕೆ ಬಗ್ಗೆ ಪರಿಶೀಲಿಸುತ್ತೇನೆ. ನಾನು, ಸಿಎಂ ಸಿದ್ದರಾಮಯ್ಯನವರು ಎಲ್ಲರೂ ಸೇರಿ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ.

ಮನೆ ಬಗ್ಗೆ ಪಂಚಾಯಿತಿ, ಸ್ಥಳೀಯ ಸಂಸ್ಥೆಯಿಂದ ನಿರ್ಧಾರವಾಗುತ್ತೆ. ಒಂದೂವರೆ ಲಕ್ಷ ಹಣ ಕೊಡುವ ವಿಚಾರಕ್ಕೆ ಮಂತ್ರಿ ಬರ್ತಾರ? ಬಿ.ಆರ್.ಪಾಟೀಲ್ ಯಾವ ಉದ್ದೇಶದಿಂದ ಹೇಳಿದ್ದಾರೆ ಗೊತ್ತಿಲ್ಲ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಇದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವೇ ಇಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular