BIG NEWS: ಭ್ರಷ್ಟಾಚಾರ ಬಹಿರಂಗಪಡಿಸಿದ್ದಕ್ಕೆ ಬಿ.ಆರ್.ಪಾಟೀಲ್ ಗೆ ಕಾಂಗ್ರೆಸ್ ನಾಯಕರಿಂದಲೇ ಬೆದರಿಕೆ: ವಿಜಯೇಂದ್ರ ಆರೋಪ

ಬೆಂಗಳೂರು: ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಳೆದ ಪರಿಣಾಮ ಕಾಂಗ್ರೆಸ್ ಹಿರಿಯ ಶಾಸಕರಾಗಿರುವ ಬಿ.ಆರ್.ಪಾಟೀಲ್ ಅವರಿಗೆ ಕೈ ನಾಯಕರೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯದಹ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ನೆಲಮಂಗಲದಲ್ಲಿ ಮಾತನಾಡಿದ ವಿಜಯೇಂದ್ರ, ಬಿ.ಆರ್.ಪಾಟೀಲ್ ಅವರು ಭ್ರಷ್ಟಾಚಾರವನ್ನು ಜನತೆಯ ಮುಂದೆ ಬಿಚ್ಚಿಟ್ಟಿದ್ದಾರೆ. ಹಾಗಾಗಿ ಅವರನ್ನು ಹೆದರಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದರು.

ಬಡವರಿಗೆ ಮನೆ ಕೊಡಬೇಕಾದಲೂ ಭ್ರಷ್ಟಾಚಾರ ನಡೆದಿದೆ. ಇದನ್ನು ಬಿ.ಆರ್. ಪಾಟೀಲ್ ರಾಜ್ಯದ ಜನತೆ ಮುಂದೆ ಹೇಳಿದ್ದಾರೆ. ಹೀಗಗೈ ಪಾಟೀಲರನ್ನು ಆಡಲಿತ ಪಕ್ಷದ ನಾಯಕರೇ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಡವರಿಗೆ, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲವಿಲ್ಲ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read