BREAKING: ಸರ್ಕಾರದ ವಿರುದ್ಧವೇ ಸ್ವಪಕ್ಷದ ಶಾಸಕನಿಂದ ಭ್ರಷ್ಟಾಚಾರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಬಿ.ಆರ್. ಪಾಟೀಲ್ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಇದು ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ವಾಕ್ಪ್ರಹಾರ ಮಾಡಲು ಮತ್ತಷ್ಟು ವಿಷಯ ಸಿಕ್ಕಂತಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ಶಾಸಕ ಬಿ.ಆರ್.ಪಾಟೀಲ್, ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಹಣ ನೀಡಿದವರಿಗಷ್ಟೇ ವಸತಿ ಮನೆಗಳನ್ನು ಮಾಡುತ್ತಿದ್ದೀರಿ ಎಂದು ಆರೋಪಿಸಿದ್ದಾರೆ. ನನ್ನ ಕ್ಷೇತ್ರದಲ್ಲಿ ಹಣ ಪಡೆದು ವಸತಿ ಹಂಚಲಾಗಿದೆ. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಸ್ವಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದು ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ಹೊಸ ಅಸ್ತ್ರ ಸಿಕ್ಕಂತಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read