HomeLatest NewsBREAKING: ಕಾಂಗ್ರೆಸ್ ಸರ್ಕಾರ = ಭ್ರಷ್ಟ ಸರ್ಕಾರ: ರಾಯರೆಡ್ಡಿ ಬೆನ್ನಲ್ಲೇ ಪುಷ್ಠಿ ನೀಡಿದ ಕೈ ಶಾಸಕ...

BREAKING: ಕಾಂಗ್ರೆಸ್ ಸರ್ಕಾರ = ಭ್ರಷ್ಟ ಸರ್ಕಾರ: ರಾಯರೆಡ್ಡಿ ಬೆನ್ನಲ್ಲೇ ಪುಷ್ಠಿ ನೀಡಿದ ಕೈ ಶಾಸಕ ಬಿ.ಆರ್.ಪಾಟೀಲ್ ಮಾತು: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧವೇ ಸ್ವಪಕ್ಷದ ಶಾಸಕ ಬಿ.ಆರ್.ಪಾಟೀಲ್ ಲಂಚದ ಆರೋಪ ಮಾಡಿದ್ದು, ಸರ್ಕಾರವನ್ನು ಹೆಣೆಯಲು ವಿಪಕ್ಷ ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಇದೇ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ = ಭ್ರಷ್ಟ ಸರ್ಕಾರ. ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಜಮೀರ್ ಅಹ್ಮದ್ ಅವರು ಮಾಡಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ ಈ ವಿಷಯದಲ್ಲಿ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದಿದ್ದಾರೆ.

ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ ಸಿದ್ದರಾಮಯ್ಯನವರೇ, ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular