HomeKarnatakaನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್​.ಪಾಟೀಲ್ ರಾಜೀನಾಮೆ

ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್​.ಪಾಟೀಲ್ ರಾಜೀನಾಮೆ

ಬೆಂಗಳೂರು: ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕ ಬಿ.ಆರ್.ಪಾಟೀಲ್ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿರುವ ಬಿ.ಆರ್.ಪಾಟೀ, ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಸಹಜವಾಗಿಯೇ ನನಗೆ ನೋವಾಗಿದೆ. ಐದು ದಶಕಗಳ‌ ರಾಜಕೀಯ ಜೀವನದಲ್ಲಿ ಹುದ್ದೆ, ವ್ಯಕ್ತಿ ಹಾಗೂ ವೈಯಕ್ತಿಕ ಹಿತಾಸಕ್ತಿಗಿಂತ ಸಿದ್ಧಾಂತವೇ ಮೇಲೆಂದು ನಾನು ನಂಬಿದ್ದೇನೆ. ಕಾಂಗ್ರೆಸ್​​ ಪಕ್ಷ‌ದ ಮೇಲಿನ ನನ್ನ ನಿಷ್ಠೆ ಅಚಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅನ್ನೋದು ಸುಳ್ಳು. ಶಾಸಕ ಸ್ಥಾನ ನನಗೆ ದೊರೆತಿರುವ ಹುದ್ದೆಯಲ್ಲ. ಬದಲಾಗಿ ಜನರು ನನ್ನ ಮೇಲೆ ನಂಬಿ ಕೊಟ್ಟಿರುವ ಜವಾಬ್ದಾರಿ. ಆ ಜನಾದೇಶಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸಚಿವ ಸ್ಥಾನ ಇರಲಿ, ಇಲ್ಲದಿರಲಿ ಕ್ಷೇತ್ರದ ಜನರ ಸೇವೆಗೆ ಬದ್ಧನಿದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂಬ ಸುಳ್ಳು ಸುದ್ದಿ. ನೀತಿ ಆಯೊಗದ ಉಪಾದ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular