HomeLatest NewsBIG NEWS: ನಾನು ಹೇಳಬೇಕಾಗಿದ್ದು ಹೇಳಿದ್ದೇನೆ; ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು ಎಂದ ಶಾಸಕ ಬಿ.ಆರ್.ಪಾಟೀಲ್

BIG NEWS: ನಾನು ಹೇಳಬೇಕಾಗಿದ್ದು ಹೇಳಿದ್ದೇನೆ; ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು ಎಂದ ಶಾಸಕ ಬಿ.ಆರ್.ಪಾಟೀಲ್

ಬೆಂಗಳೂರು: ನಾನು ಏನು ಹೇಳಬೇಕೋ ಅದನ್ನು ಸುರ್ಜೇವಾಲಾ ಬಳಿ ಹೇಳಿದ್ದೇನೆ. ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು ಎಂದು ಶಾಸಕ ಬಿ.ಆರ್.ಪಾಟೀಲ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಿ.ಆರ್.ಪಾಟೀಲ್, ಹೈಕಮಾಂಡ್ ನಾಯಕರು ಕರೆದಿದ್ದರು. ಹಾಗಾಗಿ ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದೆ. ಸುದೀರ್ಘವಾದ ಚರ್ಚೆ ನಡೆಯಿತು. ಎಲ್ಲವನ್ನೂ ಹೇಳಿದ್ದೇನೆ ಎಂದರು.

ನಾನು ಏನು ಹೇಳಬೇಕೋ ಅದನ್ನು ಅವರಿಗೆ ಹೇಳಿದ್ದೇನೆ. ಅವರು ಎಲ್ಲಾ ವಿಚಾರಗಳನ್ನೂ ನೋಟ್ ಮಾಡಿಕೊಂಡಿದ್ದಾರೆ. ಮುಂದಿನ ತೀರ್ಮಾನ ಅವರಿಗೆ ಬಿಟ್ಟದ್ದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular