BIG NEWS: ಲೋಕಸಭಾ ಚುನಾವಣೆ: ಜಗದೀಶ್ ಶೆಟ್ಟರ್ ಆಯ್ಕೆ ಖಚಿತ ಎಂದ ಮಾಜಿ ಸಿಎಂ ಯಡಿಯೂರಪ್ಪ

ಬೆಳಗಾವಿ: ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಸಾಕಷ್ಟು ಪ್ರಮಾಣದಲ್ಲಿ ಜನಸಾಗರವೇ ಹರಿದು ಬಂದಿದೆ. ಇದನ್ನು ನೋಡಿದರೆ ಅವರು ಎರಡು ಲಕ್ಷ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.

ಬೆಳಗಾವಿಯಲ್ಲಿ ಜಾತಿ ಆಧಾರದ ಮೇಲೆ ಮತಯಾಚನೆ ಮಾಡುವುದಿಲ್ಲ. ಕಾಂಗ್ರೆಸ್ ನವರು ಜಾತಿ ಆಧಾರದ ಮೇಲೆ ಬೇಕಾದರೆ ರಾಜಕಾರಣ ಮಾಡಿಕೊಳ್ಳಲಿ ನಮಗೆ ಹಿಂದೂ, ಮುಸ್ಲಿಂ ಬೇಧ ಭಾವ ಇಲ್ಲ. ಎಲ್ಲರ ಬೆಂಬಲದೊಂದಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read