HomeLive NewsBIG NEWS: ಮುಂದಿನ ವಾರದಿಂದ ಮತ್ತೆ ರಾಜ್ಯ ಪ್ರವಾಸ: ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

BIG NEWS: ಮುಂದಿನ ವಾರದಿಂದ ಮತ್ತೆ ರಾಜ್ಯ ಪ್ರವಾಸ: ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಯಡಿಯೂರಪ್ಪ, ಮುಂದಿನ ವಾರದಿಂದ ರಾಜ್ಯದೆಲ್ಲೆಡೆ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ಈ ಭ್ರಷ್ಟ, ಬೇಜವಾಬ್ದಾರಿ ಕಾಂಗ್ರೆಸ್‌ ಸರ್ಕಾರ ಕಿತ್ತೂಗೆಯಬೇಕೆಂದು ಪ್ರವಾಸ ಮಾಡಲಿದ್ದೇನೆ. ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹಣವಿಲ್ಲದೇ ರಸ್ತೆಯ ಸಣ್ಣ ಗುಂಡಿಯನ್ನೂ ಮುಚ್ಚಲು ಆಗುತ್ತಿಲ್ಲ. ಹೀಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರಿ ಅಭಿವೃದ್ಧಿ ಮಾಡುತ್ತಿರುವುದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular