HomeKarnatakaBIG NEWS: ಸಿದ್ದರಾಮಯ್ಯರಿಂದ ಹಳೆಯ ಪ್ರಕರಣ ಕೆದಕುವ ಯತ್ನ: ಈ ಬೆದರಿಕೆಗಳಿಗೆ ಜಗ್ಗಲ್ಲ, ಬಗ್ಗುವುದೂ ಇಲ್ಲ:...

BIG NEWS: ಸಿದ್ದರಾಮಯ್ಯರಿಂದ ಹಳೆಯ ಪ್ರಕರಣ ಕೆದಕುವ ಯತ್ನ: ಈ ಬೆದರಿಕೆಗಳಿಗೆ ಜಗ್ಗಲ್ಲ, ಬಗ್ಗುವುದೂ ಇಲ್ಲ: ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಸಂಡೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಕೊವಿಡ್ ಪಿಪಿಇ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ತನಿಖಾ ಆಯೋಗ ಶಿಫಾರಸು ಮಾಡಿದೆ. ಈ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಸಂಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯುರಪ್ಪ, ಸಿಎಂ ಸಿದ್ದರಾಮಯ್ಯ ಹಳೆಯ ಪ್ರಕರಣ ಕೆದಕುವ ಯತ್ನ ನಡೆಸಿದ್ದಾರೆ. ಈ ರೀತಿಯ ಬೆದರಿಕೆಗಳಿಗೆ ಯಡಿಯೂರಪ್ಪ ಜಗ್ಗಲ್ಲ, ಬಗ್ಗುವುದೂ ಇಲ್ಲ ಎಂದರು.

ನಾವು ಪ್ರಾಮಾಣಿಕವಾಗಿಯೇ ಕೆಲಸ ಮಡುದ್ದೇವೆ. ಪಿಪಿಇ ಕಿಟ್ ಖರೀದಿಯಲ್ಲಿ ಅಂದಿನ ಮಾರ್ಕೆಟ್ ರೇಟ್ ಅನುಗುಣವಾಗಿಯೇ ಕಿಟ್ ಖರೀದಿಸಲಾಗಿದೆ. ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯನವರು ತಮ್ಮ ವಿರುದ್ಧದ ಆರೋಪ, ಪ್ರಕರಣಗಳನ್ನು ಬೇರೆಡೆ ಸೆಳೆಯಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದರಿಂದ ಅವರಿಗೆ ಯಾವ ಲಾಭವೂ ಆಗಲ್ಲ. ನಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಿದ್ದರೆ ಮಾಡಲಿ. ಈ ರೀತಿಯ ಕುತಂತ್ರ ಮಾಡುವುದನ್ನು ಬಿಟ್ಟು ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಲಿ ಎಂದರು.

 

For Latest News Updates, Join Our Whatsapp Community🚩
RELATED ARTICLES

Most Popular