HomeLatest NewsBIG NEWS: ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ನೋಡಿ ರಾಜ್ಯದ ಜನತೆ ಬೇಸತ್ತಿದ್ದಾರೆ: ಮಾಜಿ ಸಿಎಂ...

BIG NEWS: ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ನೋಡಿ ರಾಜ್ಯದ ಜನತೆ ಬೇಸತ್ತಿದ್ದಾರೆ: ಮಾಜಿ ಸಿಎಂ ಯಡಿಯೂರಪ್ಪ ಕಿಡಿ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಜೋರಾಗಿದೆ. ಕುರ್ಚಿ ಕಿತ್ತಾಟ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಯಾವುದೇ ಬದಲಾವಣೆಯಾಗಬಹುದು. ಎಲ್ಲವನ್ನೂ ಕಾದುನೋಡಬೇಕಿದೆ ಎಂದರು.

ರಾಜ್ಯದಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅಭಿವೃದ್ಧಿ ಕೆಲಸಗಳು ಕುಂಟಿತವಾಗಿವೆ. ಹಲವಾರು ಸಮಸ್ಯೆಗಳಿಗೆ. ಸರ್ಕಾರ ಕುರ್ಚಿ ಕಿತ್ತಾಟ ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular