HomeKarnatakaBIG NEWS: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ; ಅಮಿತ್ ಶಾ ರನ್ನು ಕರೆಸಿ ಬೃಹತ್ ಸಮಾವೇಶ...

BIG NEWS: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ; ಅಮಿತ್ ಶಾ ರನ್ನು ಕರೆಸಿ ಬೃಹತ್ ಸಮಾವೇಶ ಮಾಡಲು ಚಿಂತನೆ; BSY ಮಾಹಿತಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದು, ಶೀಘ್ರದಲ್ಲಿಯೇ ರಾಜ್ಯದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿ.ವೈ.ವಿಜಯೇಂದ್ರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರೆಸಿ 1 ಲಕ್ಷ ಜನರನ್ನು ಸೇರಿಸಿ ಬೃಹತ್ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಆದೇಶದಂತೆ ವಿಜಯೇಂದ್ರ ಇಂದು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾದ ಬೆನ್ನಲ್ಲೇ ಕಾರ್ಯಕರ್ತರಲ್ಲಿ ಉತ್ಸಾಹ ಕಾಣುತ್ತಿದೆ. ಎಲ್ಲಾ ನಾಯಕರು ವಿಜಯೇಂದ್ರಗೆ ಆಶಿರ್ವಾದ ಮಾಡಿದ್ದಾರೆ. ಖುಷಿಯ ವಿಚಾರ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular