BIG NEWS: ಈ ಸರ್ಕಾರ ಬದುಕಿದ್ದೂ ಸತ್ತಂತೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ವಾಕ್ಪ್ರಹಾರ ನಡೆಸಿದ್ದಾರೆ. ಸರ್ಕಾರದ ಬಳಿ ಬರ ಪರಿಹಾರ ನೀಡಲು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲೂ ಹಣವಿಲ್ಲ. ಅಂದಮೇಲೆ ಈ ಸರ್ಕಾರ ಬದುಕಿದ್ದೂ ಸತ್ತಂತೆ ಎಂದು ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗುತ್ತಿದೆ. ಆದರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ. ನೌಕರರಿಗೆ ವೇತನ ಪಾವತಿಸಲು ಹಣವಿಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ. ನಮ್ಮ ಸರ್ಕಾರ ಇದ್ದಾಗ ದೇಶದಲ್ಲಿಯೇ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಐದು ತಿಂಗಳಲ್ಲೇ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಈ ಸರ್ಕಾರ ಬದುಕಿದ್ದು ಸತ್ತಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಹಳ ಕಾಲ ಇವರನ್ನು ಹೀಗೆ ಬಿಡಲು ಆಗಲ್ಲ, ನಮ್ಮ ಎಲ್ಲಾ ಮುಖಂಡರ ಜೊತೆ ಚರ್ಚೆ ಮಾಡಿ ಇದೆಲ್ಲದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read