HomeKarnatakaBIG NEWS: ಯಡಿಯೂರಪ್ಪನವರಿಗೆ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದಾರೆ; ಅಭಿಪ್ರಾಯವನ್ನೂ ಪಡೆದಿಲ್ಲ ಎಂದ ರಮೇಶ್ ಬಾಬು

BIG NEWS: ಯಡಿಯೂರಪ್ಪನವರಿಗೆ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದಾರೆ; ಅಭಿಪ್ರಾಯವನ್ನೂ ಪಡೆದಿಲ್ಲ ಎಂದ ರಮೇಶ್ ಬಾಬು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈಗ ತಮಗೇನೂ ಗೊತ್ತಿಲ್ಲ ಎಂದು ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಬಿಜೆಪಿ ನಾಯಕರಿಂದಲೇ ಅವರಿಗೆ ಬೆದರಿಕೆ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಬಾಬು, ಈ ಹಿಂದೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಆಗಿದೆ. ಎಷ್ಟು ಸೀಟು ಹಂಚಿಕೆಯಾಗಿದೆ ಎಂಬುದನ್ನು ಹೇಳಿದ್ದರು. ಆದರೆ ಈಗ ನನಗೆ ಏನೂ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ. ಯಡಿಯೂರಪ್ಪನವರಿಗೆ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದಾರೆ ಎಂದರು.

ಯಡಿಯೂರಪ್ಪ ಕುಟುಂಬವನ್ನು ಬಿಜೆಪಿ ನಾಯಕರು ಸೈಡ್ ಲೈನ್ ಮಾಡಿದ್ದಾರೆ. ಮೈತ್ರಿ ಮಾತುಕತೆಯಲ್ಲಿ ಯಡಿಯೂರಪ್ಪ ಅವರ ಅಭಿಪ್ರಾಯ ಪಡೆದಿಲ್ಲ. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಜೆಡಿಎಸ್ ಜೊತೆ ಬಿಜೆಪಿ ಹೋಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular