HomeLatest NewsBIG NEWS: ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಕೊಡದೇ ಯಾವ ಕೆಲಸವೂ ಆಗುತ್ತಿಲ್ಲ; ಬಡವರಿಂದಲೂ ಹಣ ಪಡೆದು...

BIG NEWS: ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಕೊಡದೇ ಯಾವ ಕೆಲಸವೂ ಆಗುತ್ತಿಲ್ಲ; ಬಡವರಿಂದಲೂ ಹಣ ಪಡೆದು ಮನೆ ಕೊಡುವ ದುಸ್ಥಿತಿಯಲ್ಲಿದೆ: ಮಾಜಿ ಸಿಎಂ ಯಡಿಯೂರಪ್ಪ ಕಿಡಿ

ಬೆಂಗಳೂರು: ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಕೊಡುವ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರದ ವಿರುದ್ಧ ಗರಂ ಆಗಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ದುಡ್ದು ಕೊಡದೇ ಯಾವ ಕೆಲಸವೂ ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಆಡಿಯೋ ವೈರಲ್ ವಿಚಾರವಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಬಡವರಿಂದಲೂ ಹಣ ಪಡೆದು ಅವರಿಗೆ ಮನೆಗಳನ್ನು ನೀಡುವ ದುಸ್ಥಿತಿ ಕಾಂಗ್ರೆಸ್ ಸರ್ಕಾರದಲ್ಲಿದೆ. ಇದನ್ನ ನಾವು ಹೇಳುತ್ತಿಲ್ಲ ಇಂದು ಸರ್ಕಾರದ ಶಾಸಕರೇ ಹೇಳುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಚಾರ ಹೆಚ್ಚುತ್ತಿದೆ. ಹಣ ನೀಡದೇ ಯಾವ ಕೆಲಸವೂ ಆಗುತ್ತಿಲ್ಲ ಎಂಬ ಸ್ಥಿತಿ ಇದೆ ಎಂದರು.

ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಇಂತಹ ತಪ್ಪುಗಳಾಗಂದಂತೆ ನೋಡಿಕೊಳ್ಳಬೇಕು. ಬಡವರಿಗೆ ನ್ಯಾಯ ಒದಗಿಸಿ, ಅವರಿಗೆ ಮನೆಗಳನ್ನು ನೀಡುವ ಕೆಲಸ ಮಾಡಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular