BIG NEWS: ಡಿಸಿಎಂ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಪ್ರಸ್ತಾವನೆ ವಿಚಾರ; ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಸರ್ಕಾರ ಪ್ರಸ್ತಾವನೆ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕೋರ್ಟ್ ಏನು ಹೇಳುತ್ತೆ ಎಂಬುದನ್ನು ಕಾದುನೋಡೋಣ ಎಂದಿದ್ದಾರೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಆದೇಶಿಸಿದ್ದು, ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಿದ್ದರು. ಈಗ ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆ ಆದೇಶವನ್ನೇ ಹಿಂಪಡೆಯಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಮಹತ್ವದ್ದಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಡಿದ ಮಾಜಿ ಸಿಎಂ, ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ನ್ಯಾಯಾಲಯದ ತೀರ್ಮಾನ ಅಂತಿಮವಾಗುತ್ತದೆ. ನ್ಯಾಯಾಲಯದ ತೀರ್ಪಿಗಾಗಿ ಕಾದುನೋಡೋಣ ಎಂದರು.

ಡಿ.ಕೆ.ಶಿವಕುಮಾರ್ ಅವರನ್ನು ಸರ್ಕಾರವೇ ರಕ್ಷಿಸುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ಬಗ್ಗೆ ಏನೂ ಹೇಳಲ್ಲ ಎಂದಷ್ಟೇ ಉತ್ತರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read