BIG NEWS: ಶಾಮನೂರು ಶಿವಶಂಕರಪ್ಪ ಭಾವನೆಗೆ ನನ್ನ ಬೆಂಬಲವಿದೆ ಎಂದ ಮಾಜಿ ಸಿಎಂ BSY

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯಿತರನ್ನು ಕಡೆಗಣಿಸಲಾಗಿದೆ ಎಂಬ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯಿತ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗಿದೆ. ನಮ್ಮ ಸಮುದಾಯದ ಅಧಿಕಾರಿಗಳಿಗೆ ತೊಂದರೆಯಾಗಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಸ್ವಪಕ್ಷದ ಸರ್ಕಾರದ ವಿರುದ್ಧವೇ ಆರೋಪಿಸಿದ್ದರು. ಹಿರಿಯ ಶಾಸಕರ ಹೇಳಿಕೆ ಸರ್ಕಾರದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಶಾಮನೂರು ಅವರ ಈ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಅವರು ವ್ಯಕ್ತಪಡಿಸಿರುವ ಭಾವನೆಗಳಿಗೆ ನನ್ನ ಬೆಂಬಲವಿದೆ. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿರುವುದು ನಿಜ ಎಂದಿದ್ದಾರೆ.

ಲಿಂಗಾಯತ ಸಮುದಾಯ ದೊಡ್ಡ ಪ್ರಮಾಣದಲ್ಲಿದೆ. ಸಮುದಾಯದ ನಾಯಕರನ್ನು ಪಕ್ಷದಲ್ಲಿ ಸರಿಯಾಗಿ ನಡೆಸಿಕೊಳ್ಳಲಾಗುತ್ತಿಲ್ಲ. ಕಡೆಗಣಿಸಲಾಗುತ್ತಿದೆ. ಈ ಬಗ್ಗೆ ಶಾಮನೂರು ಅವರಿಗೆ ಕಳಕಳಿಯಿದೆ. ಮಾತ್ರವಲ್ಲ ಎಲ್ಲಾ ಲಿಂಗಾಯಿತ ಮುಖಂಡರಲ್ಲಿಯೂ ಇದೆ ರೀತಿಯ ತಳಮಳವಿದೆ. ಹಾಗಾಗಿ ಶಾಮನೂರು ವೀರಶೈವ ಮಹಾಸಭಾ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಶಾಮನೂರು ಅವರ ಹೇಳಿಕೆಯನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೇ ಈ ಸಂದರ್ಭದಲ್ಲಿ ವೀರಶೈವ ಲಿಂಗಾಯಿತ ಸಮುದಾಯದವರು ಜಾಗೃತರಾಗಬೇಕು, ಒಗ್ಗಟ್ಟಾಗಬೇಕು ಎಂದು ಕರೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read