HomeKarnatakaBIG NEWS: ಇದೊಂದು ದ್ವೇಷದ ರಾಜಕಾರಣಕ್ಕೆ ಸಾಕ್ಷಿ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

BIG NEWS: ಇದೊಂದು ದ್ವೇಷದ ರಾಜಕಾರಣಕ್ಕೆ ಸಾಕ್ಷಿ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಪ್ರತಿಭಟನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಾಥ್ ನೀಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಆರ್.ಆರ್.ನಗರ ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಿರುವುದನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದ ಶಾಸಕ ಮುನಿರತ್ನಗೆ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲ ನೀಡಿದ್ದಾರೆ. ಮುನಿರತ್ನ ಕ್ಷೇತ್ರಕ್ಕೆ ಅನುದಾನವನ್ನು ಕಡಿತ ಮಾಡಿರುವುದು ದ್ವೇಷದ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಕ್ಷೇತ್ರಗಳಂತೆ ಆರ್.ಆರ್.ನಗರ ಕ್ಷೇತ್ರಕ್ಕೂ ಅನುದಾನ ಕೊಡಬೇಕು. ಅನುದಾನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಮಾತನಾಡುತ್ತೇನೆ. ಎಲ್ಲಾ ಶಾಸಕರ ಕ್ಷೇತ್ರಗಳಿಗೂ ಅನುದಾನ ನೀಡಬೇಕು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular