ಬೆಂಗಳೂರು : ಈ ಬಾರಿ ಬಿ.ಎಸ್.ಸಿ ನರ್ಸಿಂಗ್ ಕೋರ್ಸ್ಗಳ ಶುಲ್ಕ ಹೆಚ್ಚಳ ಇಲ್ಲ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಬಿ.ಎಸ್ಸಿ ನರ್ಸಿಂಗ್ ಕೋರ್ಸ್ಗಳ ಶುಲ್ಕವನ್ನು 2025-26ನೇ ಸಾಲಿಗೆ ಹೆಚ್ಚಳ ಮಾಡುವುದಿಲ್ಲ. ಅನುಮೋದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆದ ಪ್ರಕರಣಗಳು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ಅಂತಹ ಕಾಲೇಜುಗಳ ಮಾನ್ಯತೆಯನ್ನೂ ರದ್ದುಗೊಳಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

