ಹಾಸನ ಕ್ಷೇತ್ರಕ್ಕೆ ಕಾಂಗ್ರೆಸ್ ಸೂಕ್ತ ಅಭ್ಯರ್ಥಿ ಶಿವಲಿಂಗೇಗೌಡ: ಅಚ್ಚರಿ ಮೂಡಿಸಿದ ಮಾಜಿ ಸಚಿವ ಶಿವರಾಂ ಹೇಳಿಕೆ

ಹಾಸನ ಲೋಕಸಭೆ ಕ್ಷೇತ್ರಕ್ಕೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಸೂಕ್ತ ಅಭ್ಯರ್ತಿ ಎಂದು ಮಾಜಿ ಸಚಿವ ಬಿ. ಶಿವರಾಂ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಸಮರ್ಥ ಅಭ್ಯರ್ಥಿ ಎನ್ನುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿದ್ದು, ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಸಮರ್ಥರು ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಎಲ್ಲರ ಪರವಾಗಿ ಶಿವಲಿಂಗೇಗೌಡರ ಹೆಸರನ್ನು ಸೂಚಿಸುತ್ತಿದ್ದೇನೆ. ಈ ವಿಷಯದಲ್ಲಿ ಅವರನ್ನು ಕೇಳಿಲ್ಲ. ಹೈಕಮಾಂಡ್ ಗಮನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.

ಜೆಡಿಎಸ್ ಬಿಟ್ಟು ಬಂದು ಜಯಗಳಿಸಿದ ಶಿವಲಿಂಗೇಗೌಡರು ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಪಕ್ಷವನ್ನು ಮಣಿಸಲು ಅವರಿಗಿಂತ ಸಮರ್ಥ ಅಭ್ಯರ್ಥಿ ಇಲ್ಲ. ಬಿಜೆಪಿ, ಜೆಡಿಎಸ್ ಒಂದಾಗಿರುವುದರಿಂದ ಶಿವಲಿಂಗೇಗೌಡರು ಸಮರ್ಥ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಆದರೆ ಶಿವರಾಂ ಹೇಳಿಕೆಗೆ ತಿರುಗೇಟು ನೀಡಿರುವ ಶಿವಲಿಂಗೇಗೌಡ, ಲೋಕಸಭೆ ಚುನಾವಣೆಗೆ ನಾನು ಯಾವುದೇ ಕಾರಣಕ್ಕೂ ಅಭ್ಯರ್ಥಿಯಲ್ಲ. ನನ್ನನ್ನು ಅಭ್ಯರ್ಥಿ ಮಾಡುವಂತೆ ಶಿವರಾಂ ಹೇಳಿರುವುದು ಸರಿಯಲ್ಲ. ಅವರಿಗೆ ಈ ಅಧಿಕಾರ ಕೊಟ್ಟವರು ಯಾರು? ನಾಲ್ಕು ಬಾರಿ ಶಾಸಕರಾಗಿ, ಸಚಿವರಾಗಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿರುವ ಅವರೇ ಚುನಾವಣೆಗೆ ನಿಲ್ಲಲಿ. ಅದನ್ನು ಬಿಟ್ಟು ಬೇರೊಬ್ಬರ ಹೆಸರನ್ನು ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read