BIG NEWS: ನಾನೂ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ ಆದರೆ…ಎಂದು ಬೇಸರಿಸಿದ ಶ್ರೀರಾಮುಲು

ಗದಗ: ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದರೂ ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕ, ವಿಪಕ್ಷ ನಾಯಕನ ಆಯ್ಕೆ ಮಾತ್ರ ವಿಳಂಬವಾಗುತ್ತಲೇ ಇದೆ. ಇದು ಆಡಳಿತ ಪಕ್ಷ ಮಾತ್ರವಲ್ಲ ಸ್ವತಃ ಬಿಜೆಪಿ ನಾಯಕರಿಗೂ ಮುಜುಗರಕ್ಕೆ ಕಾರಣವಾಗಿದೆ.

ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಗದಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು, ನಾನು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಆದರೆ ನನ್ನ ಪ್ರಯತ್ನ ಫಲಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಸಾಕಷ್ಟ ಪ್ರಯತ್ನ ಮಾಡಿದ್ದೆ. ಆದರೆ ಆಗಲ್ಲ ಎಂಬುದು ಗೊತ್ತಾಯ್ತು. ಚುನವಣೆಯಲ್ಲಿ ಸೋತಿದ್ದೇನೆ. ಅದಕ್ಕೆ ಪಕ್ಷದ ಕೆಲಸ ಮಾಡುತ್ತಿದ್ದೇನೆ. ಖಾಲಿ ಇದ್ದೇನಲ್ಲ ಅದಕ್ಕೆ ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ಅಸಮಾಧನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ, ಮುಖ್ಯಮಂತ್ರಿಗಳು ಜನರ ಸಂಕಷ್ಟಕ್ಕೆ ನೆರವಾಗದೇ ಕಾರ್ಯಕ್ರಮಗಳಲ್ಲಿ ಕುಣಿದು ಕುಪ್ಪಳಿಸುತ್ತಿದ್ದಾರೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read