HomeKarnatakaBIG NEWS: ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎಂಬುದನ್ನು ನಾನು ಒಪ್ಪಲ್ಲ; ಮಾಜಿ ಸಚಿವ ಬಿ. ಶ್ರೀರಾಮುಲು...

BIG NEWS: ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎಂಬುದನ್ನು ನಾನು ಒಪ್ಪಲ್ಲ; ಮಾಜಿ ಸಚಿವ ಬಿ. ಶ್ರೀರಾಮುಲು ಅಚ್ಚರಿ ಹೇಳಿಕೆ

ಕೋಲಾರ: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷದ ಬಿಜೆಪಿ, ಜೆಡಿಎಸ್ ನಾಯಕರು ಹೇಳಿಕೆ ನೀಡುತ್ತಿದ್ದು, ಈ ಮಧ್ಯೆ ಇಂತಹ ಹೇಳಿಕೆಯನ್ನು ನಾನು ಒಪ್ಪಲ್ಲ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಶ್ರೀರಾಮುಲು, ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎಂಬುದನ್ನು ನಾನು ಒಪ್ಪಲ್ಲ. ಜನರ ಆಯ್ಕೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. 5 ವರ್ಷಗಳ ಕಾಲ ಸರ್ಕಾರ ನಡೆಯಲಿ ಬಿಡ್ರೀ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ಯಾವುದೇ ಆಪರೇಷನ್ ಕಮಲ ಮಾಡಲ್ಲ. ನಾವು ಏನಾದರೂ ಮಾಡಲು ಹೋದರೆ ಜನರು ತಿರುಗಿ ಬೀಳ್ತಾರೆ. ನಾವು ಏನಾದ್ರೂ ಮಾಡಿ ಅಧಿಕಾರಕ್ಕೆ ಬರಬೇಕು ಅಂತಿಲ್ಲ. ನಮಗೆ ಅವಕಾಶವಿದ್ರೆ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular