HomeKarnatakaBIG NEWS: ಸಂಸದ ಬಿ.ವೈ.ರಾಘವೆಂದ್ರ ಪೊಲೀಸ್ ವಶಕ್ಕೆ

BIG NEWS: ಸಂಸದ ಬಿ.ವೈ.ರಾಘವೆಂದ್ರ ಪೊಲೀಸ್ ವಶಕ್ಕೆ

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ಮುಂದುವರೆದಿದ್ದು, ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದ ಮೆಸ್ಕಾಂ ಕಚೇರಿ ಬಳಿ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಅಶೋಕ್ ನಾಯಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಸಂಸದ ಬಿ.ವೈ.ರಾಘವೇಂದ್ರ, ಅಶೋಕ್ ನಾಯಕ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಜೂನ್ 18ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular