ಬೆಂಗಳೂರು: ಚುನಾವಣಾ ಅಕ್ರಮ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಅಯ್ಯ ಕೂಡ ಬೆಂಬಲಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ರಾಜ್ಯದ ಮತದಾರರ ಕ್ಷಮೆ ಕೇಳಲಿ ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹತಾಶೆಯಿಂದ ರಾಹುಲ್ ಗಾಂಧಿ ಚುನಾವಣಾ ಆಯೋಗದ ಬಗ್ಗೆ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ಅದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ. ಇದಕ್ಕೆ ರಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದರು.
ಕಾಂಗ್ರೆಸ್ ನಾಯಕ ತುರ್ತು ಪರಿಸ್ಥಿತಿ ಮೈಂಡ್ ಸೆಟ್ ಬದಲಾಗಿಲ್ಲ. ಇದು ಅಪಾಯಕಾರಿ ಯೋಚನೆ. ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಅಕ್ರಮ ನಡೆದಿದ್ದರೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿದೆ? ಸಿದ್ದರಾಮಯ್ಯ ಹೇಗೆ ಸಿಎಂ ಆದರು? ಬೈ ಎಲೆಕ್ಷನ್ ನಲ್ಲಿಯೂ ಹೇಗೆ ಗೆದ್ದರು? ಎಂದು ಪ್ರಶ್ನಿಸಿದ್ದಾರೆ.