BIG NEWS: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ ಬಿಟ್ಟು ನಮ್ಮ ಬಗ್ಗೆ ಚರ್ಚೆಗೆ ಮುಂದಾಗಿದ್ದಾರೆ: ಬಿ.ವೈ.ವಿಜಯೇಂದ್ರ ಕಿಡಿ

ಬೆಳಗಾವಿ: ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದ‌ ಬಗ್ಗೆ ಸಮಗ್ರ ಚರ್ಚೆ ಮಾಡುವ ವ್ಯವಧಾನವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ವಿಜಯೇಂದ್ರ, ನಾವು ಅಧಿವೇಶನ ಆರಂಭಕ್ಕೂ‌ ಮುನ್ನ‌ವೇ ಉತ್ತರ ಕರ್ನಾಟಕ ಭಾಗದ ಹಾಗೂ ರೈತರ ಸಮಸ್ಯೆ ಬಗ್ಗೆ ಸಮಗ್ರ ಚರ್ಚೆಗೆ ಒತ್ತಾಯ ಮಾಡಿದ್ದೆವು. ಇಂದು ಮತ್ತು‌ ನಾಳೆ ಈ‌ ಬಗ್ಗೆ ಚರ್ಚೆ ಮಾಡುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿದ್ದಾರೆ. ಆದರೆ ಈ ನಡುವೆ ಆಡಳಿತ ಪಕ್ಷದ ಮುಖಂಡರು ಯಾವುದೆ ಚರ್ಚೆ ಮಾಡುವುದಕ್ಕೆ ತಯಾರಿಲ್ಲ ಎಂದು ಆರೋಪಿಸಿದರು.

ಆಡಳಿತ ಪಕ್ಷದವರು ಸದನದಲ್ಲಿ ನನ್ನ ಬಗ್ಗೆ ಮುನಿರತ್ನ ಬಗ್ಗೆ ಚರ್ಚೆ ಮಾಡುವ ಕುರಿತು ಮುಂದಾಗಿದ್ದಾರೆ. ನಾವು ಇದಕ್ಕೆ ಯಾವ ಕಾರಣಕ್ಕೂ ಬಿಡುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದಲ್ಲಿ ಉತ್ತರ ಕರ್ನಾಟಕ‌ಭಾಗದ ಚರ್ಚೆ ಮಾಡೇ ಮಾಡುತ್ತೇವೆ. ರಾಜ್ಯದಲ್ಲಿ ಕಬ್ಬು‌ಬೆಳೆಗಾರರು, ತೊಗರಿ ಬೆಳೆಗಾರರು‌ ಸಂಕಷ್ಟದಲ್ಲಿದ್ದಾರೆ. ಗುಲ್ಬರ್ಗಾ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ತೊಗರೆ ಬೆಳೆ ನಾಶವಾಗಿದೆ. ರೈತರಿಗೆ ಪರಿಹಾರ ನೀಡುವ ವಿಚಾರವಾಗಿ ಸರ್ಕಾರ ಮುಂದಾಗಬೇಕು ಈ ನಿಟ್ಟಿನಲ್ಲಿ ಸರ್ಕಾರ ಸಮರ್ಪಕ ಉತ್ತರ ನೀಡಲಿ ಎಂದು ಹೇಳಿದರು.

ನನ್ನ ಮೇಲೆ 150 ಕೋಟಿ ಆರೋಪ ಮಾಡಿದ್ದಾರೆ. ಈ‌ ಬಗ್ಗೆ ಪ್ರಿಯಾಂಕ್ ಖರ್ಗೆ ಸದನದಲ್ಲಿ ಆರೋಪ ಮಾಡಿದ್ದಾರೆ. ನಾನು ಸದನದಲ್ಲೇ ಉತ್ತರ ನೀಡುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read