HomeLatest NewsBIG NEWS: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ಸ್ಪಷ್ಟನೆ ನನಗೆ ಸಿಕ್ಕಿದೆ: ವಿಜಯೇಂದ್ರ ವಿಶ್ವಾಸ

BIG NEWS: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ಸ್ಪಷ್ಟನೆ ನನಗೆ ಸಿಕ್ಕಿದೆ: ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಾನೇ ಮುಂದುವರೆಯುವ ಬಗ್ಗೆ ಹೈಕಾಂಡ್ ನಿಂದಲೂ ಶೀಘ್ರದಲ್ಲೇ ಸ್ಪಷ್ಟತೆ ಸಿಗಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ನನಗಂತೂ ಸ್ಪಷ್ಟನೆ ಸಿಕ್ಕಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಖುವ ಮೂಲಕ ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗಿ ತಾನೇ ಮುಂದುವರೆಯಲಿದ್ದೇನೆ ಎಂದು ತಿಳಿಸಿದರು.

ಬಿಹಾರ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಎನ್ ಡಿಎ ಮೈತ್ರಿ ಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿಗೆ ಆನೆ ಬಲ ಬಂತಂದಾಗಿದೆ. ದೇಶಕ್ಕೆ ಒಂದು ಸ್ಪಷ್ಟ ಸಂದೇಶ ರವಾನೆಯಾಗಿದೆ ಎಂದರು. ಬಿಹಾರದ ಜನತೆ ಎನ್ ಡಿಎ ಮೈತ್ರಿಕೂಟಕ್ಕೆ ಆಶಿರ್ವಾದ ಮಾಡಿದ್ದಾರೆ. ಪ್ರಧಾನಿ ಮೋದಿಯವರ ಯೋಜನೆಗಳನ್ನು ನಾವು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನಾಯಕರು ಚುನಾವಣೆ ಮುಗಿಯುವರೆಗೂ ವೋಟ್ ಚೋರಿ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಯತ್ನ ನಡೆಸಿದರು. ಆದರೆ ಜನತೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಫಲಿತಾಂಶದ ಮೂಲಕ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular