ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸುನಾಮಿ ಬರುವ ಭೀತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಆಡಳಿಯ ಸಂಪೂರ್ಣ ಕುಸಿದು ಬಿದ್ದಿದೆ. ಮುಖ್ಯಮಂತ್ರಿ ಮತ್ತು ಶಾಸಕರ ನಡುವೆಯೇ ಪೈಪೋಟಿ ನಡೆಯುತ್ತಿದೆ ಎಂದರು.
ಯಾರು ಸಿಎಂ ಆಗಬೇಕು ಎಂದು ಸಿಎಂ ಪಟ್ಟಕ್ಕಾಗಿ ಪೈಪೋಟಿ ಆರಂಭವಾಗಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಸುನಾಮಿ ಬರುವ ಭೀತಿ ಇದೆ. ನವೆಂಬರ್ ವೇಳೆಗೆ ರಾಜ್ಯದಲ್ಲಿ ಕ್ರಾಂತಿ ಆಗುತ್ತೋ ಮಹಾಕ್ರಾಂತಿ ಆಗುತ್ತೋ ಕಾದುನೋಡೋಣ ಎಂದು ಹೇಳಿದರು.