HomeKarnatakaBIG NEWS: ಬಿ.ವೈ.ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

BIG NEWS: ಬಿ.ವೈ.ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ನಡೆದಿದೆ.

ಆಂಧ್ರಪ್ರದೇಶದ ಅದೋನಿ ಬಳಿ ಹೆದ್ದಾರಿಯಲ್ಲಿ ಬಿ.ವೈ.ವಿಜಯೇಂದ್ರ ಅವರ ಬೆಂಗಾವಲು ವಾಹನದ ಎರಡೂ ಟೈರ್ ಗಳು ಏಕಾಏಕಿ ಸ್ಫೋಟಗೊಂಡಿವೆ. ಅದೃಷ್ಟವಶಾತ್ ಯಾವುದೇ ಸಮಸ್ಯೆಯಾಗಿಲ್ಲ. ನಿನ್ನೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಾವಲು ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಬಿ.ವೈ.ವಿಜಯೇಂದ್ರ ಅವರು 3 ಗಂಟೆ ತಡವಾಗಿ ಮಂತ್ರಾಲಯದ ರಾಯರ ಮಠಕ್ಕೆ ತಲುಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular