HomeLive NewsBIG NEWS: ರಾಜ್ಯದಲ್ಲಿರುವುದು ಜನವಿರೋಧಿ, ಹಿಟ್ಲರ್ ಸರ್ಕಾರ: ಬಡ್ಡಿ ಸಮೇತ ಉತ್ತರ ಕೊಡುತ್ತೇವೆ: ಬಿ.ವೈ.ವಿಜಯೇಂದ್ರ ಆಕ್ರೋಶ

BIG NEWS: ರಾಜ್ಯದಲ್ಲಿರುವುದು ಜನವಿರೋಧಿ, ಹಿಟ್ಲರ್ ಸರ್ಕಾರ: ಬಡ್ಡಿ ಸಮೇತ ಉತ್ತರ ಕೊಡುತ್ತೇವೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಉಡುಪಿ: ಸರ್ಕಾರದ ವಿರುದ್ಧ ಪೋಸ್ಟ್ ಮಾಡುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ ದಬ್ಬಾಳಿಕೆ ನಡೆಸಲಾಗುತ್ತಿದೆ. ರಾಜ್ಯದಲ್ಲಿರುವುದು ಜನವಿರೋಧಿ, ಹಿಟ್ಲರ್ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಉಡುಪಿಯಲ್ಲಿ ನಡೆದ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ವಿಜಯೇಂದ್ರ, ನಮ್ಮ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುವ ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ಕೊಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು ಹೇಳಿದ್ದಾರೆ. ರಾಜ್ಯದಲ್ಲಿ ಲವ್ ಜಿಹಾದ್ ಗೆ ಹಿಂದೂ ಯುವತಿಯರು ಬಲಿಯಾಗುತ್ತಿದ್ದಾರೆ. ಮೊದಲು ಹಿಂದೂ ಯುವತಿಯರುಗೆ ಆತ್ಮರಕ್ಷಣೆ ತರಬೇತಿ ನೀಡಬೇಕಿದೆ ಎಂದರು. ಅಹಿಂದ ಹೆಸರು ಹೇಳಿಕೊಂಡು ಸಿಎಂ ಸಿದ್ದರಾಮಯ್ಯ, ಹಿಂದುಳಿದ ಸಮುದಾಯವನ್ನು ಕಡೆಗಣಿಸಿ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ ಎಂದು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular