BIG NEWS: ಆರ್ ಸಿ ಬಿ ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ: ನಾನು ಟೆಸ್ಟ್ ಮ್ಯಾಚ್ ಆಡಲು ಬಂದವನು: ಸ್ವಪಕ್ಷದ ವಿರೋಧಿ ಬಣಕ್ಕೆ ವಿಜಯೇಂದ್ರ ಎಚ್ಚರಿಕೆ

ಹುಬ್ಬಳ್ಳಿ: ತಮ್ಮ ವಿರುದ್ಧವೇ ಆರ್ ಸಿಬಿ ಬ್ರಿಗೇಡ್ ಕಟ್ಟಲು ಹೊರಟಿರುವ ಸ್ವಪಕ್ಷದ ವಿರೋಧಿ ಬಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಆರ್ ಸಿಬಿ-ರಾಯಣ್ಣ ಚನ್ನಮ್ಮ ಬ್ರಿಗೇಡ್ ಕಟ್ಟಲು ಕೆಲವರು ಹೊರಟಿರುವ ವಿಚಾರವಾಗಿ ಆರ್ ಸಿಬಿ ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡಲು ಬಂದವನು. ನಾನು ಸುದೀರ್ಘವಾಗಿ ಓಡುವ ಕುದುರೆ ಎಂದು ಟಾಂಗ್ ನೀಡಿದ್ದಾರೆ.

ವಿಜಯೇಂದ್ರ ತಾಕತ್ತಿನ ಬಗ್ಗೆ ಅರಿತುಕೊಂಡಿರುವುದು ಬಹಳ ಸಂತಸ. ನಾನು ಲಂಬಿ ರೇಸ್ ಕಾ ಗೋಡಾ ನೋಡೋಣ…ಪಕ್ಷಕ್ಕೆ ದ್ರೋಹ ಮಾಡಿ ಪಕ್ಷ ಬಿಟ್ಟು ಹೋದವರು ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಯೋಗ್ಯತೆ ಕಳೆದುಕೊಂಡಿದ್ದಾರೆ ಎಂದು ಪರೋಕ್ಷವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಿಡಿಕಾರಿದರು.

ನನಗೆ ಎಲ್ಲರನ್ನೂ ವಿಶ್ವಾಸಕ್ಕೆ ಎಗೆದುಕೊಂಡು ಕೆಲಸ ಮಾಡಲು ಭಗವಂತ ಬುದ್ಧಿ ಕೊಟ್ಟಿದ್ದಾನೆ. ಆ ಕಾರ್ಯ ಮಾಡುತ್ತೇನೆ. ನಾನು ಯಾರ ಹೇಳಿಕೆಯನ್ನೂ ಗಂಭೀರವಾಗಿ ಪರಿಗಣಿಸಲ್ಲ, ನೋವು ಮಾಡಿಕೊಳ್ಳಲ್ಲ. ಚುನಾವಣೆಯಲ್ಲಿ ಕೆಲವರನ್ನು ಪಕ್ಷದಿಂದ ಹೊರಹಾಕಿದ್ದೇವೆ. ಬಿಜೆಪಿಯಲ್ಲಿ ಈಗಾಗಲೇ ಶುದ್ಧೀಕರಣವಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read