HomeKarnatakaBIG NEWS: ಶಿವಮೊಗ್ಗ ಕ್ಷೇತ್ರಕ್ಕೆ ಈಶ್ವರಪ್ಪ ಕೊಡುಗೆ ಶೂನ್ಯ; ಬಿಜೆಪಿಗೂ ಅವರ ಕಾಣಿಕೆ ನಗಣ್ಯ; ಬಿ.ವೈ.ವಿಜಯೇಂದ್ರ...

BIG NEWS: ಶಿವಮೊಗ್ಗ ಕ್ಷೇತ್ರಕ್ಕೆ ಈಶ್ವರಪ್ಪ ಕೊಡುಗೆ ಶೂನ್ಯ; ಬಿಜೆಪಿಗೂ ಅವರ ಕಾಣಿಕೆ ನಗಣ್ಯ; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಶಿವಮೊಗ್ಗ: ಬಿಜೆಪಿ ವಿರುದ್ಧ ಬಂಡಾಯ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಕ್ಷೇತ್ರಕ್ಕೆ ಈಶ್ವರಪ್ಪನವರ ಕೊಡುಗೆ ಏನೂ ಇಲ್ಲ. ಬಿಜೆಪಿಗೂ ಅವರ ಕಾಣಿಕೆ ನಗಣ್ಯ. ಪಕ್ಷಕ್ಕೆ ಹಾನಿಯಾಗುವ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಹೇಳಿದರೂ ಅವರು ತಮ್ಮ ದಿಕ್ಕಿನಲ್ಲಿ ಮುಂದುವರೆದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದರು.

ಈಶ್ವರಪ್ಪನವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಕನಿಷ್ಟ 2.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ನಾಳೆ ಭದ್ರಾವತಿಯಲ್ಲಿ ರಾಘವೇಂದ್ರ ಪರ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪ್ರಚಾರ ಮಾಡಲಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular