ರಾಜ್ಯದ ಹಣಕಾಸು ವ್ಯವಸ್ಥೆ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆನ್ಸಿ ನೇಮಕ; ನಮ್ಮ ರಾಜ್ಯದಲ್ಲಿ ಸಿಎಂಗೆ ಸೂಕ್ತ ವ್ಯಕ್ತಿಯನ್ನು ಗುರುತಿಸಲಾಗಿಲ್ಲವೇ?; ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದ ಹಣಕಾಸು ವ್ಯವಸ್ಥೆಯ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆನ್ಸಿ ನೇಮಕ ಮಾಡಿರುವ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಸುತ್ತ ತಜ್ಞ ಅಧಿಕಾರಿಗಳು ಇದ್ದರೂ ವಿದೇಶಿ ಕನ್ಸಲ್ಟೆನ್ಸಿ ನೇಮಕ ಮಾಡಲಾಗಿದೆ. ಕಳೆದ ಒಂದು ವರ್ಷದಿಂದ ಸರ್ಕಾರ ಎಲ್ಲಾ ವಿಧದಲ್ಲಿಯೂ ವಿಫಲವಾಗಿದೆ. ಒಂದು ವರ್ಷದಿಂದ ಯವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೂಡಿಕೆ ಬಂದಿಲ್ಲ. ಕರ್ನಾಟಕ ರಾಜ್ಯ ಸಿದ್ದರಾಮಯ್ಯ ನಾಯಕತ್ವದಲಿ ಬಳಲುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹಣಕಾಸು ವ್ಯವಸ್ಥೆ ಮೇಲುಸ್ತುವಾರಿಗೆ ಯಾಕೆ ಸಿಎಂ ಸಿದ್ದರಾಮಯ್ಯ ವಿದೇಶಿ ಕನ್ಸಲ್ಟೆನ್ಸಿ ನೇಮಿಸಿದ್ದಾರೆ? ನಮ್ಮ ರಾಜ್ಯದಲ್ಲಿ ಸೂಕ್ತ ವ್ಯಕ್ತಿಯಿಲ್ಲವೇ? ಸಿದ್ದರಮಾಯ್ಯ ನಮ್ಮ ರಾಜ್ಯದ ಸೂಕ್ತ ವ್ಯಕ್ತಿಯನ್ನು ಗುರುತಿಸಿಲ್ಲ ಯಾಕೆ? ವಿದೇಶಿ ತಜ್ಞರು ಸಹಕಾರ ನೀಡುತ್ತಾರೆ ಎಂದು ನನಗೆ ಅನ್ನಿಸುತ್ತಿಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read