ಬೆಂಗಳೂರು: ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಮದ್ದೂರಿನಲ್ಲಿ ಇರುವುದು ನಾಲಾಯಕ್ ಎಸ್ ಪಿ. ಮಂಡ್ಯದಲ್ಲಿ ಪದೇ ಪದೇ ಇಂತಹ ಘಟನೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದದರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರಿಗೆ ಹಿಂದೂಗಳನ್ನು ಕಂಡರೆ ಆಗುವುದಿಲ್ಲ. ಮೊದಲು ನಿಮ್ಮ ಧೋರಣೆ ಸರಿಪಡಿಸಿಕೊಳ್ಳಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಮುಂದಾಗುವ ಘಟನೆಗಳಿಗೆ ನೀವೇ ಕಾರಣರಾಗುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ.